KARNATAKA
ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಕಾರು ಅಪಘಾತ

ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ.
ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹಾಗೂ ಕಾರ್ ಚಾಲಕನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಯಾರಿಗೂ ಗಂಭೀರ ಗಾಯವಾಗಿಲ್ಲ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.