Connect with us

    LATEST NEWS

    ನಾಳೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಂಜೆ 5 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

    ಮಂಗಳೂರು ಜುಲೈ 01: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ  ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದ್ದು, ಈಗ ಇರುವ ಬೆಳಿಗ್ಗೆ 7 ರಿಂದ ಮಧ್ಯಾಹ್ನದ 2 ಗಂಟೆಯವರೆಗೆ ಬದಲಾಗಿ ಸಂಜೆ 5 ರವರೆಗೆ ಎಲ್ಲಾ ತರಹದ ಅಂಗಡಿ ತೆರೆಯಲು ಅನುಮತಿ ನೀಡಲಾಗಿದ್ದು, ಸಂಜೆ 5 ರವರೆಗೂ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭ ಜನರು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರಕಾರ ತಿಳಿಸಿದೆ.

    ಶನಿವಾರ, ಭಾನುವಾರ ವೀಕೆಂಡ್ ಕರ್ಫ್ಯೂ ಇರಲಿದ್ದು ಅಂದು  ಮಧ್ಯಾಹ್ನ 2 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply