Connect with us

    KARNATAKA

    11 ಜಿಲ್ಲೆ ಹೊರತು ಪಡಿಸಿ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಜೂನ್ 14 ರಿಂದ ಲಾಕ್ ಡೌನ್ ಸಡಿಲಿಕೆ

    ಬೆಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ರಾಜ್ಯದ 11 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.


    ಸಚಿವ ಸಂಪುಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಿರುವ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಹೇಳಿದರು.

    ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
    ಎಲ್ಲಾ ಕಾರ್ಖಾನೆಗಳಲ್ಲಿ ಶೇಕಡ 50, ಗಾರ್ಮೆಂಟ್‌ನಲ್ಲಿ ಶೇಕಡ 30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

    ಅಗತ್ಯ ವಸ್ತು ಖರೀದಿಗೆ ಮಧ್ಯಾಹ್ನ 2ರ ವರೆಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಚಟುವಟಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಪಾರ್ಕ್‌ಗಳಲ್ಲಿ 10ಗಂಟೆವರೆಗೆ ವಾಕಿಂಗ್ ನಡೆಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನ 2ರವರೆಗೆ ವ್ಯಾಪಾರ ನಡೆಸಲು ಅನುಮತಿಸಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಾಶ ಕೊಡಲಾಗಿದೆ. ಇದೇ 14ರ ಸೋಮವಾರ ಬೆಳಿಗ್ಗೆಯಿಂದಲೇ 21ರ ಬೆಳಿಗ್ಗೆಯವರೆಗೆ ಹೊಸ ನಿಯಮ ಅನ್ವಯವಾಗಲಿದೆ. ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ ನೈಟ್ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply