KARNATAKA
ಪೈಲಟ್ ರಹಿತ ಡ್ರೋನ್ ವಿಮಾನ ಪರೀಕ್ಷಾರ್ಥ ಹಾರಾಟ ಸಂದರ್ಭ ಪತನ
ಚಿತ್ರದುರ್ಗ, ಆಗಸ್ಟ್ 20: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್ ವಿಮಾನ ರವಿವಾರ ಬೆಳಗ್ಗೆ ಪತನಗೊಂಡಿರುವುದು ವರದಿಯಾಗಿದೆ.
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ನಾಯಕನಹಟ್ಟಿ ಸಮೀಪದ ಕುದಾಪುರ ವಾಯುನೆಲೆಯಿಂದ ರವಿವಾರ ಬೆಳಗ್ಗೆ ಹಾರಾಟ ಆರಂಭಿಸಿತ್ತು. ನಿಯಂತ್ರಣ ತಪ್ಪಿ ಜಮೀನಿಲ್ಲಿ ಪತನವಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿಮಾನ ಪತನವಾದ ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ವಿಮಾನದ ಪಳೆಯುಳಿಕೆಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಡಿ.ಆರ್.ಡಿ.ಓ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
You must be logged in to post a comment Login