Connect with us

BELTHANGADI

ನ್ಯಾಯಾಧೀಶರ ಮುಂದೆ ಹಾಜರಾದ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮಾಹಿತಿ ಇರುವ ವ್ಯಕ್ತಿ

ಬೆಳ್ತಂಗಡಿ ಜುಲೈ 11: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಕುರಿತಂತೆ ಮಾಹಿತಿ ಮತ್ತು ಸಾಕ್ಷಿ ಇದೆ ಎಂದು ವಕೀಲರ ಮೂಲಕ ಹೇಳಿಕೆ ನೀಡಿದ್ದ ಅನಾಮಧೇಯ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶ ರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದ ಅಪರಾಧ ಕೃತ್ಯಗಳ ಕುರಿತಂತೆ ಮಾಹಿತಿ ಮತ್ತು ಅದಕ್ಕೆ ಸಂಬಂಧಿಸಿದ ಸಾಕ್ಷಿಗಳು ಇದೆ ಎಂದು ಅನಾಮಧೇಯ ವ್ಯಕ್ತಿಯೊಬ್ರ ವಕೀಲರ ಮೂಲಕ ಪೊಲೀಸರಿಗೆ ಪತ್ರ ಬರೆದಿದ್ದರು. ಈ ಕುರಿತಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *