Connect with us

LATEST NEWS

12 ಮಂದಿಯನ್ನು ಬಲಿ ತೆಗೆದುಕೊಂಡ ಗ್ಯಾಸ್ ಟ್ಯಾಂಕರ್

ಲಖನೌ: ಉತ್ತರ ಪ್ರದೇಶದ ಸಂಭಾಲ್ ಪ್ರದೇಶದಲ್ಲಿ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಬಲಿಯಾಗಿದ್ದಾರೆ. ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಸರಕಾರಿ ಬಸ್ ನ ಅರ್ಧಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


ಮಧ್ಯಪ್ರದೇಶದ ಅಲಿಘರ್​ಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಸರ್ಕಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ನಸುಕಿನಲ್ಲಿ ಅಧಿಕ ಮಂಜು ಆವರಿಸಿದ್ದು, ರಸ್ತೆಯಲ್ಲಿ ವಾಹನಗಳು ಗೋಚರಿಸದ ಕಾರಣ ಎದುರು ಬದುರಾಗಿ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ 12 ಮಂದಿ ಬಲಿಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ದೇಹ ಕ್ಯಾಂಟರ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹೊರಕ್ಕೆ ತೆಗೆಯಲು ಶ್ರಮ ಪಡಬೇಕಾಯಿತು.


ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಬಹುತೇಕ ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಹಾಗೂ ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ.

 

Facebook Comments

comments