ಉತ್ತರಪ್ರದೇಶ ಡಿಸೆಂಬರ್ 07: ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಜನರನ್ನು ಬೆಚ್ಚಿಬೀಳಿಸಿದೆ. ಅಂಗಡಿಯ ಮುಂಭಾಗದ ರಸ್ತೆಬದಿಯ ಧೂಳಿ ಗೆ ನೀರು ಹಾಯಿಸುತ್ತಿದ್ದ ಯುವಕನೊಬ್ಬ ಮೇಲೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಕಾರಿನ ವೇಗ ಎಷ್ಟು ತೀವ್ರವಾಗಿತ್ತೆಂದರೆ, ಡಿಕ್ಕಿಯ ನಂತರ ಯುವಕ ಸುಮಾರು 30 ಅಡಿ ದೂರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾನೆ.

ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಿಸಿಟಿವಿಯಲ್ಲಿ ಇಡೀ ಘಟನೆ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗಿದೆ. ನೌತನ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋರಖ್‌ಪುರ-ಸೋನೌಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೇಪಾಳದ ನಿವಾಸಿ ಅಭಿಷೇಕ್ ಯಾದವ್ ಮೃತಪಟ್ಟ ಯುವಕ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಡಿಸೆಂಬರ್ 3 ರಂದು ಅಭಿಷೇಕ್ ಎಂದಿನಂತೆ ಅಂಗಡಿಗೆ ಬಂದಿದ್ದರು. ಅಂಗಡಿಯ ಮುಂಭಾಗದ ರಸ್ತೆಬದಿಯ ಧೂಳಿನ ಮೇಲೆ ನೀರು ಸುರಿಯುತ್ತಿದ್ದರು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಳಿಯಲ್ಲಿ ಹಾರಿ ಸುಮಾರು 30 ಅಡಿ ದೂರದಲ್ಲಿ ಇಳಿದರು. ಅಭಿಷೇಕ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

Share Information