Connect with us

LATEST NEWS

ಉತ್ತರ ಪ್ರದೇಶದ ಶಿಕ್ಷಣ ಸಚಿವೆ ಕೋವಿಡ್ ಗೆ ಬಲಿ

ಲಕ್ನೋ, ಆಗಸ್ಟ್ 2: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂಪುಟದ ಸಹೋದ್ಯೋಗಿ, ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದ ಕಮಲ್ ರಾಣಿ ವರುಣ್ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜುಲೈ 18ರಂದು ಕೊರೊನಾ ಪಾಸಿಟಿವ್ ಆಗಿದ್ದ ಕಮಲ್ ರಾಣಿ ವರುಣ್, ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ‌ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

 

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಿಝಿಯಾಗಿರುವ ಸಿಎಂ ಯೋಗಿ ಆದಿತ್ಯನಾಥ್, ಇದೇ ಸಂದರ್ಭದಲ್ಲಿ ತನ್ನ ಸಹೋದ್ಯೋಗಿ ಮೃತರಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಸಚಿವೆ ಆಗುವುದಕ್ಕೂ ಮೊದಲೇ ಸಾಮಾಜಿಕ ಕಾರ್ಯಕರ್ತೆಯಾಗಿ ಪ್ರಸಿದ್ಧಿ ಗಳಿಸಿದ್ದರು. ಸಚಿವ ಸ್ಥಾನದಲ್ಲಿದ್ದುಕೊಂಡು ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸಿದ್ದಾರೆ‌ ಎಂದು ಸ್ಮರಿಸಿದ್ದಾರೆ.

Facebook Comments

comments