ಕಾಸರಗೋಡು ಮಾರ್ಚ್ 2: ರೈಲ್ವೆ ಹಳಿ ದಾಟುತ್ತಿರುವ ಸಂದರ್ಭ ರೈಲು ಬಡಿದು ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಉಪ್ಪಳ ರೈಲು ನಿಲ್ದಾಣ ಸಮೀಪ ನಡೆದಿದೆ.

ಮೃತರನ್ನು ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಎಂದು ಗುರುತಿಸಲಾಗಿದೆ. ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟ ಐಶ್ವರ್ಯ ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.