DAKSHINA KANNADA
ಉಪ್ಪಿನಂಗಡಿ : ಹಿಜಬ್ ಗೆ ನಿರ್ಬಂಧ- ಪರೀಕ್ಷೆಯನ್ನು ಬಹಿಷ್ಕರಿಸಿದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು
ಉಪ್ಪಿನಂಗಡಿ ಮಾರ್ಚ್ 18: ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿರ್ಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಬಳಿಕವೂ ಹಿಜಬ್ ವಿವಾದ ಮತ್ತೆ ಮುಂದುವರೆದಿದ್ದು, ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ತೆರಳಿದ ಘಟನೆ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರು ಪಿಯು ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಲು ಆಗಮಿಸಿದ್ದು, ಅವರನ್ನು ಕಾಲೇಜು ಆಡಳಿತ ಮಂಡಳಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಇನ್ನು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಬಳಿ ಜಮಾವಣೆಯಾಗಿದ್ದು, ಬಳಿಕ ಮುಸ್ಲಿಂ ಸಮುದಾಯದ ನಾಯಕರ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಿ ಕ್ಯಾಂಪಸ್ ನಿಂದ ಹೊರ ಕಳುಹಿಸಲಾಯಿತು. ಈ ಎಲ್ಲಾ ಘಟನೆಯಿಂದಾಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ವಾಪಾಸ್ ಆಗಿದ್ದಾರೆ.