Connect with us

    DAKSHINA KANNADA

    ಉಪ್ಪಿನಂಗಡಿ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಡಿಗ್ರಿ ಸ್ಟೂಟೆಂಡ್

    ಉಪ್ಪಿನಂಗಡಿ ಫೆಬ್ರವರಿ 15: ಕಾಲೇಜು ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.


    ಅತಾವುಲ್ಲಾ ಮಡಂತ್ಯಾರಿನ ಕಾಲೇಜು ಒಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಎಂದು ಹೇಳಲಾಗಿದೆ. ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆಬ್ರವರಿ 14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ.

    ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. . ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply