ಉಪ್ಪಿನಂಗಡಿ ಫೆಬ್ರವರಿ 11: ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಸಾವನಪ್ಪಿದ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಹೇಮಚಂದ್ರ (32) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿದೆ. ಮೃತ ಹೇಮಚಂದ್ರ ಅವಿವಾಹಿತನಾಗಿದ್ದು, ಇವರೇ ಮನೆಗೆ ಆಧಾರ ಸ್ತಂಭವಾಗಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.