Connect with us

    DAKSHINA KANNADA

    ಉಪ್ಪಿನಂಗಡಿ – ಸ್ಕೂಟರ್ ಗೆ ಟೆಂಪೋ ಡಿಕ್ಕಿ ಓರ್ವ ಸಾವು ಮತ್ತೊರ್ವ ಗಂಭೀರ

    ಉಪ್ಪಿನಂಗಡಿ ಅಕ್ಟೋಬರ್ 19: ದ್ವಿಚಕ್ರ ವಾಹನಕ್ಕೆ ಟೆಂಪೋ ಒಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.


    ಮಂಗಳೂರಿನ ಕುಂಟಲ್ಪಾಡಿ ಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ ಅಂಕಿತ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುತ್ತಿದ್ದ ಮೀನು ಸಾಗಾಟದ ಟೆಂಪೋ ಸಣ್ಣಂಪಾಡಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸಚಿನ್ ಎಂಬವರ ತಲೆಯ ಮೇಲೆ ಟೆಂಪೋದ ಚಕ್ರಗಳು ಹರಿದಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply