BELTHANGADI
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲು ಧರ್ಮಸ್ಥಳದಲ್ಲಿ ಉರುಳುಸೇವೆ..!
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯೊಬ್ಬರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ್ದಾರೆ.
ಧರ್ಮಸ್ಥಳ : ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯೊಬ್ಬರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ ಅಭಿಮಾನಿಯಾಗಿದ್ದಾರೆ.
ಕಳೆದ ಎರಡು ದಿನಗಳಿಂದ ದಿಢೀರನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆಯಲ್ಲಿ ತೊಡಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.
You must be logged in to post a comment Login