LATEST NEWS
ಉಡುಪಿ – ನೀರನ್ನು ಕುದಿಸಿ ಕುಡಿಯಲು ಸೂಚನೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಮೇ 03 : ಉಡುಪಿ ನಗರವಾಸಿಗಳು ನೀರನ್ನು ಕುದಿಸಿ ಕುಡಿಯುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಹೊಂಡಗಳಿಂದ ನೀರನ್ನು ಪಪಿಂಗ್ ಮೂಲಕ ಸರಬರಾಜು
ಮಾಡಲಾಗುತ್ತಿದೆ. ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login