LATEST NEWS
ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆ ಎಂದು ನಾನು ಹೇಳಿಲ್ಲ – ಮಾಜಿ ಸಚಿವ ಯು.ಟಿ ಖಾದರ್ ಟ್ವೀಟ್

ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆ ಎಂದು ನಾನು ಹೇಳಿಲ್ಲ – ಮಾಜಿ ಸಚಿವ ಯು.ಟಿ ಖಾದರ್ ಟ್ವೀಟ್
ಮಂಗಳೂರು ಡಿ.19: ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಡಿ.17 ರಂದು ನಡೆದ ಪ್ರತಿಭಟನೆಯಲ್ಲಿ ಪೌರತ್ವ ಕಾಯ್ದೆ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯಲಿದೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ತನ್ನ ಹೇಳಿಕೆ ಬಗ್ಗೆ ಇಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ಖಾದರ್.CAB ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ.ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ ಎಂದು ಟ್ವೀಟ್ ಮಾಡಿದ್ದಾರೆ.
