LATEST NEWS
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಸ್ಪೀಕರ್ ಖಾದರ್ ಅಭಿನಂದನೆ
ಮಂಗಳೂರು ಜನವರಿ 21: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ನಲ್ಲಿ ದರೋಡೆ ಮಾಡಿದ ದರೋಡೆಕೋರರನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸರು ಕ್ರಮವನ್ನು ಸ್ಪೀಕರ್ ಖಾದರ್ ಶ್ಲಾಘಿಸಿದ್ದಾರೆ.
ದರೋಡೆಯಾದ ಅಲ್ಪಾವಧಿಯಲ್ಲೇ ಆರೋಪಿಗಳನ್ನು ಬಂಧಿಸಿರುವುದರಿಂದ ಪೊಲೀಸರ ಮೇಲಿನ ವಿಶ್ವಾಸ ಮತ್ತು ನಂಬಿಕೆ ಇಮ್ಮಡಿಯಾಗಿದೆ. ಪೊಲೀಸರ ಶ್ರಮಕ್ಕೆ ಕೃತಜ್ಞತೆಗಳು. ಇದೇ ರೀತಿ ಬಂಟ್ವಾಳ ನಾರ್ಶದ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣದಲ್ಲೂ ಆರೋಪಿಗಳು ಶೀಘ್ರ ಪೊಲೀಸ್ ಬಲೆಗೆ ಬೀಳಲಿದ್ದಾರೆ. ಇದರ ತನಿಖೆಯಲ್ಲಿ ಬಹಳಷ್ಟು ಪ್ರಗತಿ ಕಂಡು ಬಂದಿದೆ ಎಂದು ಯು.ಟಿ.ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.