Connect with us

    LATEST NEWS

    ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಹೇಳಿಕೆಗೆ ಶಾಸಕ ಖಾದರ್ ತಿರುಗೇಟು….!!

    ಬೆಂಗಳೂರು ನವೆಂಬರ್ 05: ದೈವನರ್ತಕರಿಗೆ ಸರಕಾರ ಮಾಸಾಶನ ನೀಡಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.


    ಈ ಕುರಿತು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ (Karavali) ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ.


    ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply