LATEST NEWS
ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಯು.ಟಿ ಖಾದರ್ ಗೆ ಕೊರೊನಾ ಪಾಸಿಟಿವ್

ಮಂಗಳೂರು ಸೆಪ್ಟೆಂಬರ್ 2: ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಅವರು ಮೂರು ದಿನಗಳ ಕಾಲ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳು ರದ್ದುಪಡಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ ಆರ್ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಪಡಿಸಲಾಗಿತ್ತು. ದರಿಂದಾಗಿ ಗುರುವಾರ ರಾತ್ರಿ ಶಾಸಕ ಯು.ಟಿ.ಖಾದರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಅವರಿಗೆ ಸೋಂಕು ಇದೆ ಎಂಬ ವರದಿ ಬಂದಿದ್ದು ವೈದ್ಯರ ಸಲಹೆಯಂತೆ 3 ದಿನಗಳ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ. ಆದ್ದರಿಂದ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ.ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ.

ಕ್ವಾರಂಟೈನ್ ಕಾರಣ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿನಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಅಗತ್ಯಬಿದ್ದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಾಸಕರ ಪ್ರಕಟನೆ ತಿಳಿಸಿದೆ.