LATEST NEWS
ಅನಿವಾಸಿ ಭಾರತೀಯರನ್ನು ಲೋಫರ್ ಎಂದ ಸಚಿವ ಯು.ಟಿ. ಖಾದರ್

ಅನಿವಾಸಿ ಭಾರತೀಯರನ್ನು ಲೋಫರ್ ಎಂದ ಸಚಿವ ಯು.ಟಿ. ಖಾದರ್
ಮಂಗಳೂರು ಮಾರ್ಚ್ 1: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರ ವಾಗುತ್ತಿದ್ದಂತೆ ಸಚಿವ ಯು.ಟಿ ಖಾದರ್ ಒಂದಲ್ಲ ಒಂದು ವಿವಾದಗಳಿಗೆ ಸಿಲುಕುತ್ತಿದ್ದಾರೆ. ಇತ್ತೀಚಗಷ್ಟೇ ಇಲ್ಯಾಸ್ ಕೊಲೆ ಆರೋಪಿಗಳೊಂದಿಗೆ ಖಾದರ್ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಮತ್ತೊಂದು ವಿವಾದ ವನ್ನು ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗಕ್ಕೆ ತೆರಳಿರುವ ಕರಾವಳಿಯ ಯುವಕರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂತಾ ಸಚಿವ ಯು.ಟಿ. ಖಾದರ್ ಕರೆದಿದ್ದಾರೆ. ಸಚಿವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ಊರಿನಲ್ಲಿ ಜನರಿಗೆ ಢೋಂಗಿ ಮಾಡಿ ವಿದೇಶಕ್ಕೆ ಹೋಗ್ತಾರೆ ಎಂಬ ಸಚಿವ ಯು.ಟಿ.ಖಾದರ್ ಹೇಳಿಕೆಗೆ ಮುಸ್ಲಿಂ ಸಮುದಾಯದಲ್ಲೇ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಈ ಹೇಳಿಕೆ ನೀಡಿದ್ದು ಈ ಕರಿತ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹೇಳಿಕೆ ಪಕ್ಷದ ಕಾರ್ಯಕರ್ತರಲ್ಲೇ ಅಸಮಾಧಾನವನ್ನು ಸೃಷ್ಠಿಸಿದ್ದು, ಕಾರ್ಯಕರ್ತರೇ ಖಾದರ್ ಬ್ಯಾನರ್ ಗಳನ್ನು ಹರಿದು ಹಾಕಿದ್ದಾರೆ. ಖಾದರ್ ಚಿತ್ರಕ್ಕೆ ಬ್ಲೇಡ್ ನಿಂದ ಹರಿದು, ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಸಚಿವ ಖಾದರ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗಕ್ಕೆ ತೆರಳುವ ಕರಾವಳಿಯ ಮುಸ್ಲಿಂ ಸಮುದಾಯದ ಯುವಕರನ್ನು ಹಿಯಾಳಿಸಿರುದು ಸರಿಯಲ್ಲ ಎಂದು ಟೀಕಿಸಿರು ಮುಸ್ಲಿಂ ಒಕ್ಕೂಟ, ಸಚಿವ ಯು.ಟಿ ಖಾದರ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಹಾಗು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ..