KARNATAKA
ಇಸ್ರೋಗೆ ಭೇಟಿ ನೀಡಿದ ಯು.ಟಿ. ಖಾದರ್ – ಚಂದ್ರಯಾನ 3 ರ ವಿಜ್ಞಾನಿಗಳನ್ನು ಸನ್ಮಾನಿಸಿದ ಸ್ಪೀಕರ್..!
ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಬೆಂಗಳೂರು: ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಮತ್ತು ಅವರ ವಿಜ್ಞಾನಿಗಳ ತಂಡ ಮತ್ತು ಸಿಬ್ಬಂದಿ ವರ್ಗದವರನ್ನು ಖಾದರ್ ಅವರು ಅಭಿನಂದಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಯು. ಟಿ. ಖಾದರ್ ” ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಕ್ರಾಂತಿಗೆ ನನ್ನದೊಂದು ಸಲಾಂ. ಚಂದ್ರನ ದಕ್ಷಿಣ ಧ್ರುವದ ಮೇಲಿಳಿದ ಜಗತ್ತಿನ ಮೊದಲ ದೇಶ ಭಾರತ ಎಂಬ ಮಾತು ಕೇಳುತ್ತಲೇ ಮೈ ರೋಮಾಂಚನವಾಗುತ್ತಿದೆ.
ಈ ಐತಿಹಾಸಿಕ ಕಾಲಘಟ್ಟಕ್ಕೆ ನಾನು ಸಹ ಸಾಕ್ಷಿಯಾಗಿದ್ದೇನೆ ಎಂಬುದೇ ಹೆಮ್ಮೆಯ ವಿಚಾರ . ಇಸ್ರೊ ಸಂಸ್ಥೆಯ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿ ವರ್ಗಕ್ಕೆ ನನ್ನ ತುಂಬ ಹೃದಯದ ಅಭಿನಂದನೆಗಳು.
ನಮ್ಮ ವಿಜ್ಞಾನಿಗಳ ಸಾಧನೆ ದಿಗಂತದಾಚೆಗೂ ಮುಂದುವರಿಯಲಿ. ಇಸ್ರೋ ಗೆಲ್ಲುತ್ತಲೇ ಇರಲಿ. ಭಾರತದ ಬಾವುಟ ಹೊಸ ಕಕ್ಷೆ ತಲುಪಲಿ. ಮೇರಾ ಭಾರತ್ ಮಹಾನ್ ʼʼ ಎಂದು ಅವರು ಬರೆದುಕೊಂಡಿದ್ದಾರೆ.