LATEST NEWS
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಆಗಿ ಹಾವಿನ ವಿಷ – ಬಿಗ್ ಬಾಸ್ ಸ್ಪರ್ಧಿ ವಿರುದ್ದ ಎಫ್ಐಆರ್
ನವದೆಹಲಿ ನವೆಂಬರ್ 13: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಎಲ್ವಿಶ್ ಯಾದವ್ ಆಯೋಜಿಸಿದ್ದ ರೇವ್ ಪಾರ್ಟಿಗಳಿಗೆ ಹಾವು ಮತ್ತು ಅವುಗಳ ವಿಷವನ್ನು ಸರಬರಾಜು ಮಾಡುತ್ತಿದ್ದ ಐವರನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿನ ವಿವಿಧ ಫಾರ್ಮ್‌ಹೌಸ್‌ಗಳಲ್ಲಿ ಈ ಪಾರ್ಟಿಗಳನ್ನು ಆಯೋಜಿಸಲಾಗಿತ್ತು ಮತ್ತು ಎಲ್ವಿಶ್ ಯಾದವ್ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗಾಗಿ ವೀಡಿಯೊಗಳನ್ನು ಶೂಟ್ ಮಾಡಲು ಹಾವುಗಳನ್ನು ಬಳಸಿಕೊಂಡರು ಎಂದು ಐವರು ಪೊಲೀಸರು ಪೊಲೀಸರಿಗೆ ತಿಳಿಸಿದ್ದಾರೆ.
ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಆರೋಪದ ಮೇಲೆ ಪಾರ್ಟಿ ಆಯೋಜಿಸಿದ್ದ ಯೂಟ್ಯೂಬರ್ ಮತ್ತು ಹಿಂದಿಯ ಬಿಗ್ ಬಾಸ್ ಓಟಿಟಿ ರಿಯಾಲಿಟಿ ಶೋ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಎಲ್ವಿಶ್ ಯಾದವ್ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದರಲ್ಲಿ ಐವರನ್ನು ಬಂಧಿಸಲಾಗಿದೆ. ಎಲ್ವಿಶ್ ಯಾದವ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಿಂದ ಐದು ನಾಗರಹಾವು ಸೇರಿ 9 ಹಾವುಗಳು ಮತ್ತು ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರ ಎನ್‌ಜಿಒ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸಂಘಟನೆಯ ದೂರಿನ ಮೇರೆಗೆ ಗುರುವಾರ ರಾತ್ರಿ ನೋಯ್ಡಾದ ಸೆಕ್ಟರ್ 51ರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.