Connect with us

    LATEST NEWS

    ಉತ್ತರ ಪ್ರದೇಶ – ಮದುವೆ ಸಮಾರಂಭದಲ್ಲಿ ಗಂಗಾ ಪೂಜೆ ವೇಳೆ ಬಾವಿಗೆ ಬಿದ್ದು 9 ಮಕ್ಕಳು ಸೇರಿದಂತೆ 13 ಮಂದಿ ಸಾವು

    ಖುಷಿನಗರ: ವಿವಾಹದ ಸಂದರ್ಭದಲ್ಲಿ ನಡೆಸುವ ಗಂಗಾ ಪೂಜೆ ವೇಳೆ ಹಳೆಯ ಬಾವಿಗೆ ಬಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 13 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.


    ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆ ಮಾಡುವುದು ಕುಟುಂಬದ ಸಂಪ್ರದಾಯವಾಗಿದ್ದು, ಗಂಗೆ ಪೂಜೆಗೆಂದು ಬಾವಿ ಬಳಿ ನೂರಾರು ಜನರು ಸೇರಿದ್ದಾರೆ. ಕೆಲವ ಮಹಿಳೆಯರು ಹಾಗೂ ಮಕ್ಕಳು ಗಂಗೆ ಪೂಜೆಯನ್ನು ಬಾವಿಯ ಮೇಲ್ಚಾವಣಿ ಮೇಲೆ ಕುಳಿತು ನೋಡುತ್ತಿದ್ದರು.


    ಬಾವಿಯು ಹಳೆಯದಾಗಿದ್ದು, ಮೇಲ್ಚಾವಣಿ ದುರ್ಬಲವಾಗಿದ್ದರಿಂದ ಕುಸಿದು ಬಿದ್ದಿದೆ. ಪರಿಣಾಮ ಮೇಲ್ಚಾವಣಿ ಮೇಲೆ ಕುಳಿತಿದ್ದ ಮಹಿಳೆಯರು ಹಾಗೂ ಮಕ್ಕಳು ಬಾವಿಗೆ ಬಿದ್ದಿದ್ದಾರೆ. ಬಳಿಕ ಬಾವಿಯೊಳಗೆ ಬಿದ್ದ ತಮ್ಮ ಕುಟುಂಬಸ್ಥರನ್ನು ಕಾಪಾಡಲು ಒಬ್ಬರ ಹಿಂದೆ ಒಬ್ಬರು ಮಹಿಳೆಯರು ಬಾವಿಗೆ ಹಾರಿದ್ದಾರೆ. ಹೀಗೆ ಸುಮಾರು 25ಕ್ಕೂ ಹೆಚ್ಚು ಮಂದಿ ಮಹಿಳೆಯರು ಬಾವಿಗೆ ಬಿದ್ದಿದ್ದಾರೆ.


    ಬಳಿಕ ಸ್ಥಳದಲ್ಲಿದ್ದವರು ಕೆಲವರನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಘಟನೆಯಲ್ಲಿ 9 ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 18 ಮಂದಿ ಮಹಿಳೆಯರಿಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಗ್ರಾಮಸ್ಥರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply