Connect with us

    LATEST NEWS

    ಅನಧಿಕೃತ ಧಾರ್ಮಿಕ ಕಟ್ಟಡ ಕಟ್ಟಡ ತೆರವುಗೊಳಿಸಿ- ದ.ಕ ಜಿಲ್ಲಾಧಿಕಾರಿ

    ಅನಧಿಕೃತ ಧಾರ್ಮಿಕ ಕಟ್ಟಡ ಕಟ್ಟಡ ತೆರವುಗೊಳಿಸಿ- ದ.ಕ ಜಿಲ್ಲಾಧಿಕಾರಿ

    ಮಂಗಳೂರು ಡಿಸೆಂಬರ್ 7 : ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚಿಸಿದ್ದಾರೆ.

    ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಉದ್ಯಾನವನಗಳಲ್ಲಿ, ರಸ್ತೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳನ್ನು ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

    ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಇಂತಹ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ 1579 ಧಾರ್ಮಿಕ ಕಟ್ಟಡಗಳನ್ನು 2009ರಲ್ಲಿ ಗುರುತಿಸಲಾಗಿದ್ದು, ಈ ಪೈಕಿ 345 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. 139 ಕಟ್ಟಡಗಳು ಸಕ್ರಮೀಕರಣಗೊಂಡಿವೆ. 1095 ಧಾರ್ಮಿಕ ಕಟ್ಟಡಗಳು ಬಾಕಿ ಇವೆ ಎಂದು ಅವರು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಎಮ್.ಜೆ ರೂಪಾ ಮಾತನಾಡಿ, ಪ್ರತಿಯೊಂದು ಪ್ರಕರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ತಹಶೀಲ್ದಾರ್‍ಗಳಿಗೆ ಸೂಚಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply