Connect with us

    KARNATAKA

    ವ್ಯಾಲೆಂಟೈನ್ಸ್ ಡೇ – ಕಾಂಗ್ರೇಸ್ ನಿಂದ ಬಿಜೆಪಿ ನಾಯಕರ ಪೋಸ್ಟರ್ ಅಭಿಯಾನ

    ಬೆಂಗಳೂರು ಪೆಬ್ರವರಿ 14: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೇಸ್ ಸಾಮಾಜಿಕ ಜಾಲತಾಣ ಸಕ್ರಿಯವಾಗಿದ್ದು, ಇದೀಗ ಪ್ರೇಮಿಗಳ ದಿನವಾದ ಇಂದು ಕಾಂಗ್ರೇಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಚಿವರ ವ್ಯಾಲೆಂಟೈನ್ ಡೇ ಪೋಸ್ಟ್ ರ್ ಗಳನ್ನು ಬಿಡುಗಡೆ ಮಾಡುತ್ತಿದೆ.

    ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರವುಳ್ಳ ಪೋಸ್ಟರ್ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ”ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!! ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ” ಎಂದು ವ್ಯಂಗ್ಯವಾಡಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply