FILM
ಖ್ಯಾತ ಹಿನ್ನಲೆ ಗಾಯಕಿ ವಾಣಿ ಜಯರಾಮ್ ಇನ್ನಿಲ್ಲ
ಚೆನ್ನೈ ಫೆಬ್ರವರಿ 4: ಖ್ಯಾತ ಹಿರಿಯ ಹಿನ್ನಲೆ ಗಾಯಕಿ ವಾಣಿ ಜಯರಾಮ್ ಅವರು ತಮ್ಮ ಚೆನ್ನೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಹಣೆಗೆ ಗಾಯಗಳಾಗಿದ್ದು, ಸಾವಿನ ಬಗ್ಗೆ ಸಂಶಯವಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
You must be logged in to post a comment Login