UDUPI
ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿ.. ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಿದ ಕರ್ನಾಟಕ ವಿದ್ಯುತ್ ನಿಗಮ
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿಯಾಗಿದೆ. ನೀರಿನ ಒಳ ಹರಿವು ಇದೇ ರೀತಿ ಮುಂದುವರೆದರೆ ಅಣೆಕಟ್ಟಿಗೆ ಅಪಾಯವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ ಅಣೆಕಟ್ಟಿನ ನೀರು ಬಿಡಲು ಕರ್ನಾಟಕ ವಿದ್ಯುತ್ ನಿಗಮ ಮುಂದಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಯಾವುದೇ ಕ್ಷಣದಲ್ಲಿ ಅಣೆಕಟ್ಟು ತುಂಬುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲೂ ಅಣೆಕಟ್ಟಿನಿಂದ ನೀರನ್ನು ಹೊರ ಬಿಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನಲೆ ಅಣೆಕಟ್ಟಿನ ಕೆಳದಂಡೆ ಮತ್ತು ವಾರಾಹಿ ನದಿ ಪಾತ್ರದಲ್ಲಿರುವ ಜನರಿಗೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
ವಾರಾಹಿ ನದಿ ಪಾತ್ರವಾಗಿರುವ ಹಾಲಾಡಿ ಪ್ರದೇಶದಲ್ಲಿ ವಾರಾಹಿ ನದಿ ನೀರು ಬಿಟ್ಟರೆ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಜನ-ಜಾನುವಾರುಗಳ ಜೊತೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.ಭಾರಿ ಮಳೆಯಾಗುತ್ತಿರುವ ಹಿನ್ನಲೆ ಈ ಪ್ರದೇಶಗಳ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ ಅಲ್ಲದೆ. ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಿದೆ.
You must be logged in to post a comment Login