Connect with us

    LATEST NEWS

    ಕರಾವಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ನೀ ಪೂಜೆ

    ಕರಾವಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ನೀ ಪೂಜೆ

    ಮಂಗಳೂರು ಅಗಸ್ಟ್ 24:ರಾಜ್ಯಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರಾವಳಿಯಲ್ಲೂ ಕೂಡ ವರಮಹಾಲಕ್ಷ್ಮೀ ಹಬ್ಬವನ್ನು ಮಹಿಳೆಯರು ಸಂಭ್ರಮ ಸಡಗರದಿಂದ ಆಚರಿಸಿದರು.

    ಕರಾವಳಿಯ ಹೆಚ್ಚಿನ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು “ಭಾಗ್ಯದ ಲಕ್ಷ್ಮೀ ಬಾರಮ್ಮ” ಎಂಬ ಭಜನೆ ಹಾಡಿನೊಂದಿಗೆ ಭಕ್ತಿ ಬಾವದಿಂದ ಪೂಜಿಸಲಾಯಿತು.

    ಮಹಿಳೆಯರ ಹಬ್ಬವೆಂದೇ ಬಣ್ಣಿಸುವ ವರಮಹಾಲಕ್ಷ್ಮೀ ಪೂಜೆಗೆ ಕರಾವಳಿಯಲ್ಲಿ ಅಂತಹ ವಿಶೇಷ ಪ್ರಾಶಸ್ತ್ಯವಿಲ್ಲದಿದ್ದರೂ ಕೆಲವೊಂದು ದೇವಸ್ಥಾನಗಳಲ್ಲಿ ಮಾತ್ರ ವರ್ಷಾಂಪ್ರತಿ ವರಮಹಾಲಕ್ಷ್ಮೀ ಪೂಜೆಯ ದಿನ ಶ್ರೀ ದೇವಿಯ ಆರಾಧನೆ ಸಂಭ್ರಮ ಸಡಗರದಿಂದ ನಡೆಯುತ್ತದೆ.

    ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರಮುಖ ದೇವಸ್ಥಾನಗಳಾದ ಮಂಗಳಾದೇವಿ, ಮಾರಿಗುಡಿ, ಶ್ರೀ ಕ್ಷೇತ್ರ ಕಟೀಲು, ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಗಳಲ್ಲಿ ಇಂದು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply