FILM
ರಕ್ತದೊತ್ತಡದಲ್ಲಿ ಏರುಪೇರು ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಹೈದರಾಬಾದ್ ಡಿಸೆಂಬರ್ 25 : ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನಲೆ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನ ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜನಿಕಾಂತ್ ಅಭಿನಯದ ‘ಅಣ್ಣಾತೆ’ ಸಿನಿಮಾದ ಶೂಟಿಂಗ್ ಹೈದರಾಬಾದ್‌ನಲ್ಲಿ ನಡೆಯುತ್ತಿತ್ತು. ಸಿನಿಮಾ ಸೆಟ್‌ನಲ್ಲಿ 4 ಮಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬುಧವಾರ ಶೂಟಿಂಗ್ ಅನ್ನು ನಿಲ್ಲಿಸಲಾಗಿತ್ತು.
ಅವರು ಕಳೆದ 10 ದಿನಗಳಿಂದ ಚಿತ್ರವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ನಲ್ಲಿ ಉಳಿದುಕೊಂಡಿದ್ದರು. ಶೂಟಿಂಗ್ ಸೆಟ್‌ನಲ್ಲಿದ್ದ ಕೆಲವರಿಗೆ ಕೋವಿಡ್ ಇರುವುದು ಪತ್ತೆಯಾಗಿತ್ತು. ಡಿಸೆಂಬರ್ 22ರಂದು ರಜನಿಕಾಂತ್ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆದರೆ, ಅವರಲ್ಲಿ ಕೋವಿಡ್ ಇರುವುದು ಪತ್ತೆಯಾಗಿರಲಿಲ್ಲ’ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ. ‘ಕೋವಿಡ್‌ನ ಯಾವುದೇ ಲಕ್ಷಣಗಳು ಅವರಲ್ಲಿ ಕಂಡಬಂದಿಲ್ಲ. ಆದರೆ, ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿದೆ. ಆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದಲ್ಲಿ ಏರುಪೇರು ಕಾಣಿಸಿಕೊಂಡದ್ದನ್ನು ಹೊರತುಪಡಿಸಿದರೆ, ಅವರಿಗೆ ಬೇರೆ ಯಾವುದೇ ಖಾಯಿಲೆಯ ಲಕ್ಷಣಗಳಿಲ್ಲ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ’ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
