LATEST NEWS
ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳು ಜಾರಿ – ಕಾಮತ್
ಮಂಗಳೂರು ಡಿಸೆಂಬರ್ 03: ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕ ವಿಶಿಷ್ಟ ಕೊಡುಗೆ ನೀಡಿದೆ ಎಂದರು.
ಕುದ್ಕೋರಿಗುಡ್ಡೆಯ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬಹು ಸಮಯದ ಬೇಡಿಕೆಗಳನ್ನು ಪೂರೈಸಲು ಅನುದಾನ ಒದಗಿಸಲಾಗಿದ್ದು ಅತ್ಯಂತ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.