MANGALORE
ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ನಮಿಸಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್
ಮಂಗಳೂರು ಎಪ್ರಿಲ್ 16: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯೂ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ಗೌರವ ಸಮರ್ಪಸಿದ್ದೆ. ಕುದ್ಮುಲ್ ರಂಗರಾವ್ ಅವರು ನನಗೆ ಆದರ್ಶ. ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆ, ಹಿಂದುಳಿದ ಸಮಾಜವನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮುನ್ನೆಲೆಗೆ ತರಬೇಕೆಂಬ ಅವರ ಆಶಯವನ್ನು ಆದರ್ಶವಾಗಿ ಪರಿಗಣಿಸಿ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳಿದರು.
ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಮಾತನಾಡಿ, ತನ್ನ ಶಾಸಕತ್ವದ ಅವಧಿಯಲ್ಲಿ ನಮ್ಮ ಸಮುದಾಯದ ಪ್ರತಿಯೊಂದು ಬೇಡಿಕೆಗಳಿಗೂ ಪೂರಕವಾಗಿ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲಿ ಎಂದು ಹೇಳಿದರು.