LATEST NEWS
ತಮ್ಮ ವಿರುದ್ದ ಮಾನಹಾನಿಕರ ವರದಿ ಮಾಡದಂತೆ ತಡೆಯಾಜ್ಞೆ ತಂದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್

ಮಂಗಳೂರು ಎಪ್ರಿಲ್ 22: ಚುನಾವಣೆಯ ಬೆನ್ನಲ್ಲೆ ಇದೀಗ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗುತ್ತಿರುವ ಪ್ರಕರಣಗಳು ಜಾಸ್ತಿಯಾಗಿದ್ದು, ಮುಲ್ಕಿ ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಬಳಿಕ ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟಿನಿಂದ ತನ್ನ ವಿರುದ್ದ ಮಾನ ಹಾನಿಕಾರದ ವರದಿ , ಚಿತ್ರ , ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿ ಮಾಡಿದ್ದಾರೆ.
ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕರಾವಳಿಯ ಬಿಜೆಪಿ ಅಭ್ಯರ್ಥಿಗಳು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ತಡೆಯಾಜ್ಞೆ ತರುವ ವಿದ್ಯಮಾನಗಳು ಜಾಸ್ತಿಯಾಗುತ್ತಿವೆ.
ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಬಳಿಕ ಇದೀಗ ಮಂಗಳೂರು ದಕ್ಷಿಣದ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಈ ನಡುವೆ ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
