ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ
ಮಂಗಳೂರು ಎಪ್ರಿಲ್ 23: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ವೇದವ್ಯಾಸ್ ಕಾಮತ್ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸಿದರು. ಮಂಗಳೂರು ಪ್ರಸಿದ್ದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕುದ್ರೋಳಿ ದೇವಸ್ಥಾನದಿಂದ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಸಾಗಿದ ವೇದವ್ಯಾಸ್ ಕಾಮತ್ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.



