LATEST NEWS
ಕೃತಕ ನೆರೆ ಸಮಸ್ಯೆ ಬಗೆಹರಿಸಲು ರಾಜಕಾಲುವೆ ಅಭಿವೃದ್ದಿಗೆ ಹೆಚ್ಚಿನ ಅನುದಾನ – ಕಾಮತ್
ಮಂಗಳೂರು ಡಿಸೆಂಬರ್ 5: ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಕೃತಕ ನೆರೆ ಸಮಸ್ಯೆ ಬಗೆಹರಿಸಲು ರಾಜಕಾಲುವೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ನಗರದ ಬಹುಕಾಲದ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ನಮ್ಮ ಆಡಳಿತ ವ್ಯವಸ್ಥೆಯು ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಬಳ್ಳಾಲ್ ಭಾಗ್ ಲವಕುಶ ಸಂಕೀರ್ಣ ಹಾಗೂ ಅಮೃತ ಅಪಾರ್ಟ್‌ಮೆಂಟ್ ಬಳಿ 1.20 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಸಮಸ್ಯೆ ಎದುರಿಸುತಿದ್ದ ವಾರ್ಡ್ ಗಳಲ್ಲಿ ರಾಜಕಾಲುವೆ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಬಳ್ಳಾಲ್ ಭಾಗ್ ಲವಕುಶ ಸಂಕೀರ್ಣ ಹಾಗೂ ಅಮೃತ ಅಪಾರ್ಟ್‌ಮೆಂಟ್ ಬಳಿಯ ರಾಜಕಾಲುವೆಗೆ ತಡೆಗೋಡೆ ನಿರ್ಮಿಸಿ ಮಳೆನೀರು ಉಕ್ಕಿ ಹರಿಯದಂತೆ ತಡೆಗೋಡೆ ನಿರ್ಮಿಸಿ ಈ ಭಾಗದ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಹೇಳಿದರು.