LATEST NEWS
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ – 95% ಕೆಲಸ ಮುಗಿದಿದೆ – ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ಮಾರ್ಚ್ 07: ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.
ಅವರು ಮಂಗಳೂರಿನ “ತುಳು ಭವನ”ದಲ್ಲಿ ನಡೆದ “ತುಳು ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕು ಎನ್ನುವುದು ಎಂಬುದು ನಮ್ಮೆಲ್ಲರ ಒಕ್ಕೊರಲ ಬೇಡಿಕೆ. ಆ ನಿಟ್ಟಿನಲ್ಲಿ ಶಾಸಕನಾದ ದಿನದಿಂದಲೂ ಕಾರ್ಯ ವ್ಯಾಪ್ತಿಯಲ್ಲಿ ಪ್ರಯತ್ನಿಸುತ್ತಿದ್ದೇನೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಹೇಗೆ ಅಧಿಕೃತ ಭಾಷೆಯನ್ನಾಗಿ ಮಾಡಿದ್ದಾರೆ ಎಂಬ ವರದಿ ಈಗಾಗಲೇ ಸರಕಾರದ ಮುಂದಿದೆ. ಈ ನಿಟ್ಟಿನಲ್ಲಿ 95% ಕೆಲಸಗಳು ಪೂರ್ಣಗೊಂಡಿದ್ದು, 5% ಕೆಲಸಗಳಷ್ಟೇ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮೆಲ್ಲರ ಆಶಯವಾಗಿದೆ. ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಮತ್ತೆ ಆಗ್ರಹಿಸುತ್ತೇನೆ ಎಂದರು.