Connect with us

    LATEST NEWS

    ಮಂಗಳೂರು ವೆನ್ಲಾಕ್ ಆಸ್ಪತ್ರೆ ಈಗ ಕರೋನಾ ಆಸ್ಪತ್ರೆ

    ಮಂಗಳೂರು ವೆನ್ಲಾಕ್ ಆಸ್ಪತ್ರೆ ಈಗ ಕರೋನಾ ಆಸ್ಪತ್ರೆ

    ಮಂಗಳೂರು ಮಾ.26: ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿದ್ದು, ಕೊರೊನಾ ಪಾಸಿಟೀವ್ ರೋಗಿಗಳಿಗಾಗಿ 250 ಬೆಡ್ ಗಳನ್ನು ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

    ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಕೊರೊನಾ ಪಾಸಿಟೀವ್ ಇರುವ ರೋಗಿಗಳಿಗಾಗಿಯೇ 250 ಬೆಡ್ ಗಳನ್ನು ಮೀಸಲಿಡಲಾಗಿದ್ದು, 20 ಹಾಸಿಗೆಗಳನ್ನು ಕೊರೊನಾ ಶಂಕಿತರಿಗಾಗಿ ಮೀಸಲಿಡಲಾಗಿದೆ. ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೊನಾ ಶಂಕಿತರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈಗಾಗಲೇ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಹೊರ ರೋಗಿಗಳಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ.

    ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಸೌಲಭ್ಯ ಮಾಡಲಾಗಿದೆ. ಜಿಲ್ಲೆಯಲ್ಲಿರುವ ಪ್ರತೀ ಮೆಡಿಕಲ್ ಕಾಲೇಜುಗಳಲ್ಲಿ 20 ಐಸೋಲೇಷನ್ ವಾರ್ಡ್ ಗಳನ್ನು ತೆರೆಯಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಈಗಾಗಲೇ 5 ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 4 ಮಂದಿ ಕಾಸರಗೋಡಿನವರು, ಒಬ್ಬ ಭಟ್ಕಳದವರು. ಒಟ್ಟು ಜಿಲ್ಲೆಯಲ್ಲಿ 140 ಕೊರೊನಾ ಶಂಕಿತರಿದ್ದು, 17 ಮಂದಿಯ ರಿಪೋರ್ಟ್ ಬರಲು ಬಾಕಿಯಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply