FILM
ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ

ಹೈದರಾಬಾದ್ ಜುಲೈ 13: ತೆಲುಗು ಚಿತ್ರರಂಗದ ಖ್ಯಾತ ಹಿರಿಯ ಪೋಷಕನಟ ಕೋಟ ಶ್ರೀನಿವಾವಾಸ ರಾವ್ (83) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿಯೇ ಇಂದು ಮುಂಜಾನೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಟ ವಯೋಸಹಜ ಕಾಯಿಲೆ ಹಾಗೂ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕೋಟ ಶ್ರೀನಿವಾಸ ರಾವ್ ಜುಲೈ 10, 1942 ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. 4 ದಶಕಗಳ ಕಾಲ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಂಗಭೂಮಿಯ ಹಿನ್ನಲೆಯಿಂದ ಬಂದ ಶ್ರೀನಿವಾಸ ರಾವ್, ಹಲವು ವರ್ಷಗಳ ಕಾಲ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

1978ರಲ್ಲಿ ‘ಪ್ರಾಣಂ ಖರೀಧು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ತಮಿಳು, ಹಿಂದಿ ಮತ್ತು ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇಲ್ಲಿಯವರೆಗೆ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.