ಮಿಂಚಿನ ಓಟ ಮುಗಿಸಿದ ಹಿರಿಯ ನಟ ಲೋಕನಾಥ್

ಬೆಂಗಳೂರು ಡಿಸೆಂಬರ್ 31: ಮಿಂಚಿನ ಓಟ ಖ್ಯಾತಿಯ ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ಇಂದು ಬೆಳಗಿನ ಜಾವ ವಿಧಿ ವಶರಾಗಿದ್ದಾರೆ.

ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರಿಗೆ 90 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಧ್ಯಾಹ್ನ 12 ರಿಂದ 2.30ರವರೆಗೂ ಅಂತಿಮ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಬಂಗಾರದ ಪಂಜರ, ಕಾಕನಕೋಟೆ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಲೋಕನಾಥ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

3 Shares

Facebook Comments

comments