Connect with us

FILM

ದಕ್ಷಿಣಭಾರತ ಚಿತ್ರರಂಗದ ದಂತಕಥೆ ಬಹುಭಾಷಾ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು ಜುಲೈ 14: ಒಂದು ಕಾಲದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅನಭಿಷಕ್ತ ರಾಣಿಯಂತೆ ಮೆರೆದಿದ್ದ, ಬಹುಭಾಷಾನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು.


ದಕ್ಷಿಣಭಾರತದ ಚಿತ್ರರಂಗದಲ್ಲಿ ಸರೋಜಾದೇವಿಯವರು ಸೂಪರ್ ಸ್ಟಾರ್ ನಟಿ ಆಗಿ ಮರೆದಿದ್ದರು, ಅಂದಿನ ಕಾಲದ ದಕ್ಷಿಣ ಭಾರತ ಚಿತ್ರರಂಗದ ಎಲ್ಲಾ ಸೂಪರ್ ಸ್ಟಾರ್ ಗಳ ಜೊತೆ ಕೆಲಸ ಮಾಡಿದ್ದರು.
ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸರೋಜಾ ದೇವಿ, ತಮ್ಮ ಮೊದಲ ಚಿತ್ರದಲ್ಲೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು. ನಂತರ, 1958 ರಲ್ಲಿ ಎಂಜಿಆರ್ ಅವರ ‘ನಾಡೋಡಿ ಮನ್ನನ್’ ಚಿತ್ರದ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಿದರು. ನಂತರ 1959 ರಲ್ಲಿ ನಿರ್ದೇಶಕ ಶ್ರೀಧರ್ ಅವರ ‘ಕಲ್ಯಾಣಪರಿಸು’ ಚಿತ್ರದಲ್ಲಿ ನಟಿಸಿದರು. ಆ ಕಾಲದಲ್ಲಿ ತಮಿಳು ಚಿತ್ರರಂಗದ ಅಗ್ರ ತಾರೆಯರಾದ ಎಂಜಿಆರ್, ಶಿವಾಜಿ ಗಣೇಶನ್ ಮತ್ತು ಜೆಮಿನಿ ಗಣೇಶನ್ ಅವರೊಂದಿಗೆ ನಟಿಸುವುದರಲ್ಲಿ ಬ್ಯುಸಿಯಾಗಿದ್ದ ನಟಿ ಯಾರಾದರೂ ಇದ್ದರೆ ಅದು ಸರೋಜಾ ದೇವಿ ಮಾತ್ರ.

ನಟಿ ಸರೋಜಾ ದೇವಿ ಅವರು ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಪಡೆದಿದ್ದಾರೆ ಮತ್ತು ಇತರ ಅನೇಕ ಸರ್ಕಾರಿ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *