Connect with us

  DAKSHINA KANNADA

  ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (63) ನಿಧನ..!

  ಮಂಗಳೂರು :  ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (63)  ಇಂದು( ಶುಕ್ರವಾರ)  ಬೆಳಿಗ್ಗೆ ಮಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

  ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು.

  ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇರ್ಪಡೆಗೊಂಡ ಅವರು ಸುದೀರ್ಘ ಕಾಲ ಮುಖ್ಯ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.

   

   

  ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು.  ಉತ್ತಮ ಕಾರ್ಯಕ್ರಮ ನಿರ್ವಹಕರೂ ಆಗಿದ್ದು , ಸ್ಥಳೀಯ ಟಿವಿ ಕಾರ್ಯಕ್ರಮಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ.   ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಮನೋಹರ ಪ್ರಸಾದ್ ಅವರು ಕಳೆದ ಎರಡು ವರ್ಷದ ಹಿಂದೆ ವೃತ್ತಿಯಿಂದ ನಿವೃತ್ತರಾಗಿದ್ದರು.  ನಿವೃತ್ತಿ ಬಳಿಕವೂ ಸದಾ ಲವಲವಿಕೆಯಿಂದ ಜೀವನ ಸಾಗಿಸುತ್ತಿದ್ದರು ಮತ್ತು ಅನೇಕ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply