KARNATAKA
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ..
ಬೆಂಗಳೂರು : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ತೀವ್ರ ಹೃದಯಾಘಾತದಿಂದನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಇನ್ನೂ ಹಲವು ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.
You must be logged in to post a comment Login