Connect with us

    FILM

    ಸ್ಯಾಂಡಲ್ ವುಡ್‌ನ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ….!!

    ಬೆಂಗಳೂರು ನವೆಂಬರ್ 08: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಲೋಹಿತಾಶ್ವ ಮಧ್ಯಾಹ್ನ ವೇಳೆಗೆ ಇಹಲೋಕ ತ್ಯಜಿಸಿದರು.


    ಹೃದಯಾಘಾತದಿಂದ ಲೋಹಿತಾಶ್ವ ಅವರನ್ನು ಕಳೆದ ಒಂದು ತಿಂಗಳ ಹಿಂದೆ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಮಾರು ಒಂದು ತಿಂಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 80 ವರ್ಷದ ನಟ ಇಂದು ಕೊನೆಯುಸಿರೆಳೆದರು.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಲೋಹಿತಾಶ್ವ ಅವರಿಗೆ ಅಕ್ಟೋಬರ್ 9 ಹೃದಯಾಘಾತವಾಗಿತ್ತು ಬಳಿಕ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದರು. ಹಿರಿಯನಟನ ಅಗಲಿಕೆಗೆ ಅನೇಕ ಸಿನಿಮಾ ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply