FILM
ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್ದೀಪ್ ರಾಯ್ ನಿಧನ
ಬೆಂಗಳೂರು, ಜನವರಿ 29: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು.
ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್ದೀಪ್ ಪುತ್ರಿ ಅಕ್ಷತಾ ಮಾಹಿತಿ ನೀಡಿದ್ದಾರೆ.

ಕಳೆದ ಡಿಸೆಂಬರ್ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 75 ವರ್ಷ ವಯಸ್ಸಾಗಿತ್ತು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್ ನಾಗ್, ಶಂಕರ್ ನಾಗ್, ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.
ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್ದೀಪ್ ರಾಯ್ ನಟಿಸಿದ್ದಾರೆ.
You must be logged in to post a comment Login