Connect with us

    KARNATAKA

    ಕನ್ನಡದ ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ

    ಬೆಂಗಳೂರು ಎಪ್ರಿಲ್ 19: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.


    ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ತಡರಾತ್ರಿ 1.15ಕ್ಕೆ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಒಂದು ವಾರದ ಹಿಂದಷ್ಟೇ ಮೂತ್ರನಾಳದ ಸೋಂಕಿಗೆ ಒಳಗಾಗಿದ್ದ ಅವರನ್ನು ಶಾಂತಿ ಸರ್ಜಿಕಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಬೇಕಿತ್ತು. ಆದರೆ ರಾತ್ರಿ ವಯೋಸಹಜವಾಗಿ ಅಸ್ವಸ್ಥರಾಗಿ ನಿಧನರಾಗಿದ್ದಾರೆ ಅವರ ಕುಟುಂಬದ ಮೂಲಗಳು ತಿಳಿಸಿವೆ.

    ಚಾಮರಾಜಪೇಟೆಯ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದ್ದು, ಜಯನಗರ 7ನೇ ಬ್ಲಾಕ್‌ನ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರೊ.ಜಿ.ವೆಂಕಟಸುಬ್ಬಯ್ಯ 1913ರ ಆಗಸ್ಟ್ 13ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂನಲ್ಲಿ ಜನಿಸಿದ್ದರು. ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ‘ಕನ್ನಡ ನಿಘಂಟು ಶಾಸ್ತ್ರ ಪರಿಚಯ’ ಇವರ ಶ್ರೇಷ್ಠ ಗ್ರಂಥ.

    Share Information
    Advertisement
    Click to comment

    Leave a Reply

    Your email address will not be published. Required fields are marked *