Connect with us

    FILM

    ಬಹುಭಾಷಾ ನಟಿ ಜಮುನಾ ಇನ್ನಿಲ್ಲ….!!

    ಬೆಂಗಳೂರು ಜನವರಿ 27: ಹಿರಿಯ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.


    1953ರಲ್ಲಿ ತೆರೆಕಂಡ ಪುಟ್ಟಿಲ್ಲು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದವರು ಜಮುನಾ. ಆನಂತರ ತೆಲುಗು, ತಮಿಳು, ಹಿಂದಿ, ಕನ್ನಡ ಹೀಗೆ ನಾನಾ ಭಾಷೆಯ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ದಕ್ಷಿಣದ ಅಷ್ಟೂ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಜೊತೆ ಭೂ ಕೈಲಾಸ ಮತ್ತು ಸಾಕ್ಷಾತ್ಕಾರ ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.

    ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಜಮುನಾ, ಎನ್.ಟಿ.ಆರ್. ಜಗ್ಗಯ್ಯ ಸೇರಿದಂತೆ ಆ ಕಾಲದ ಸೂಪರ್ ಸ್ಟಾರ್ ಗಳ ಜೊತೆ ನಟಿಸಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದ್ದು. ದೊಂಗ ರಾಮುಟು, ಗುಂಡಮ್ಮ ಕಥ, ತೆನಾಲಿ ರಾಮಕೃಷ್ಣ ಹೀಗೆ ಇವರ ನಟನೆಯ ಸೂಪರ್ ಹಿಟ್ ಚಿತ್ರಗಳು. ಪುಟ್ಟಣ್ಣ ಕಣಗಾಲ್ ನಿರ್ದೇಶನ ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply