LATEST NEWS
9ನೇ ತರಗತಿ ಪಠ್ಯಪುಸ್ತಕದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ಧರ್ಮಗಳ ಬಗ್ಗೆ ಮುದ್ರಣ – ಹಿಂದೂ ಸಂಘಟನೆಗಳ ಪ್ರತಿಭಟನೆ

9ನೇ ತರಗತಿ ಪಠ್ಯಪುಸ್ತಕದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ಧರ್ಮಗಳ ಬಗ್ಗೆ ಮುದ್ರಣ – ಹಿಂದೂ ಸಂಘಟನೆಗಳ ಪ್ರತಿಭಟನೆ
ಮಂಗಳೂರು ಜೂನ್ 7: 9ನೇ ತರಗತಿಯ ಪಠ್ಯಪುಸ್ತಕದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಧರ್ಮಗಳ ಬಗ್ಗೆ ಪಠ್ಯಪುಸ್ತಕದಲ್ಲಿ ಮುದ್ರಿಸಿರುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ನಗರದ ಜ್ಯೋತಿ ವೃತ್ತದ ಬಳಿಯಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಶ್ವಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮುಸ್ಲಿಂ ಹಾಗೂ ಕ್ರಿಶ್ವಿಯನ್ ಧರ್ಮದ ಬಗ್ಗೆ ಮುದ್ರಿಸಲಾಗಿದ್ದು, ಶಾಲೆಯ ಪುಸ್ತಕದ ಚಟುವಟಿಕೆಯಲ್ಲಿ ಮಸೀದಿ, ಚರ್ಚ್ ಗೆ ತೆರಳಿ ಅಧ್ಯಯನ ನಡೆಸಲು ಸೂಚಿಸಿರುವುದು ಖಂಡನೀಯ ಎಂದರು.

ಇಂದು ಮತಾಂತರ ನಡೆಸುವ ಉದ್ದೇಶದಿಂದಲೇ ಇಂತಹ ಕೃತ್ಯ ಇದನ್ನು ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ 9ನೇ ತರಗತಿಯ ಪಠ್ಯಪುಸ್ತಕದಲ್ಲಿರುವ ವಿಚಾರವನ್ನು ಬದಲಾಯಿಸದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.