LATEST NEWS
ಮುಸ್ಲಿಂರಿಗೆ 10 ಸಾವಿರ ಕೋಟಿ ಅನುದಾನ ಘೋಷಣೆ – ಸಿದ್ದರಾಮಯ್ಯ ನೇತೃತ್ವದ ಸರಕಾರ ವಜಾಕ್ಕೆ ವಿಎಚ್ ಪಿ ಆಗ್ರಹ
ಮಂಗಳೂರು ಡಿಸೆಂಬರ್ 09: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಮುಸ್ಲಿಮರಿಗೆ ರೂ 10,000 ಕೋಟಿ ಅನುದಾನ ಘೋಷಣೆ ಮಾಡಿರುವ ಸಿದ್ಧರಾಮಯ್ಯನವರ ಸರಕಾರವನ್ನು ವಜಾಮಾಡಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಈಗಾಗಲೇ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದ್ದು, ಮುಂದಿನ ವರ್ಷ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುಧಾನ ಖಂಡಿತವಾಗಿ ಕೊಟ್ಟೆ ಕೊಡುತ್ತೇನೆ ಎಂದು ಹೇಳಿಕೆಯನ್ನು ಕೊಟ್ಟಿದ್ದಾರೆ, ಈ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಮುಸ್ಲಿಮರಿಗೆ ಪ್ರತೇಕ ಅನುದಾನ ಕೊಡಲು ಸಂವಿಧಾನದಲ್ಲಿ ಅವಕಾಶವಿರುವುದಿಲ್ಲ Article 29 ವ್ಯಾಖ್ಯೆಯ ಪ್ರಕಾರ ಮುಸ್ಲಿಮರಿಗೆ ವಿಶೇಷ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶವಿರುವುದಿಲ್ಲ.
ಅಲ್ಪ ಸಂಖ್ಯಾತರಲ್ಲಿ ಆರು ಧರ್ಮಿಯರಿದ್ದು ಅವುಗಳನ್ನು ಸಮಾನವಾಗಿ ನೋಡಬೇಕಾಗಿರುವಾಗ, ಮುಸ್ಲಿಂ ಒಂದು ಸಮುದಾಯಕ್ಕೆ ಮಾತ್ರ ಅದು ಅಗಾಧ ಪ್ರಮಾಣದಲ್ಲಿ ಅನುದಾನ ನೀಡಿರುವುದು ಸಂವಿಧಾನ ಬಾಹಿರವಾಗಿದೆ. ಮಾತ್ರವಲ್ಲ ಇದು ರಾಜ್ಯದಲ್ಲಿ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಕೆಲಸವಾಗಿರುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸಂವಿಧಾನ ವಿರೋಧವಾಗಿ ರಾಜ್ಯದ ಖಜಾನೆಯನ್ನು ಅಗಾಧ ಪ್ರಮಾಣದಲ್ಲಿ ಖರ್ಚು ಮಾಡುತ್ತಿರುವ ಸಿದ್ದರಾಮಯ್ಯ ಸರಕಾರವನ್ನು ವಜಾಗೊಳಿಸಲು ಘನವೆತ್ತ ರಾಜ್ಯಪಾಲರಲ್ಲಿ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಲಾಯಿತು. ಅದರಿಂದ ಮಾನ್ಯ ರಾಜ್ಯಪಾಲರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಿದ್ಧರಾಮಯ್ಯನವರ ಸರಕಾರವನ್ನು ವಜಾಮಾಡಬೇಕೆಂದು ಶರಣ್ ಪಂಪ್ ವೆಲೆ ಪ್ರಾಂತ ಸಹಕಾರ್ಯದರ್ಶಿ ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.