LATEST NEWS
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಂಗಳಾರತಿ ತೆಗೆಯಲು ವಿಎಚ್ ಪಿ ಮನವಿ

ಉಡುಪಿ ಮಾರ್ಚ್ 26: ಟಿಪ್ಪುವಿನ ಹೆಸರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ತೆಗೆಯಬೇಕೆಂದು ವಿಶ್ವಹಿಂದೂಪರಿಷತ್ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ.
ಮತಾಂಧ ಕ್ರೂರಿ ಟಿಪ್ಪುವಿನ ಹೆಸರಿನಲ್ಲಿ ಶಕ್ತಿ ಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ರಾತ್ರಿ 8 ಗಂಟೆಗೆ ದೇವಿಗೆ ಮಹಾಮಂಗಳಾರತಿ ನಡೆಯುತ್ತಿದೆ. ಇದು ಗುಲಾಮಗಿರಿಯ ಸಂಕೇತವಾಗಿದ್ದು, ಕೊಟ್ಯಾಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಾದ್ದಾಗಿದೆ ಎಂದು ವಿಎಚ್ ಪಿ ಆರೋಪಿಸಿದೆ.

ಈ ಹಿನ್ನಲೆ ಕೂಡಲೇ ಸರಕಾರ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕೆಂದು ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ.