Connect with us

  LATEST NEWS

  ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ – ಶರಣ್ ಪಂಪ್ ವೆಲ್

  ಉಡುಪಿ ಅಗಸ್ಟ್ 03: ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ರಾಕ್ಷಸಿಯರು ಬಂದಿದ್ದರು ಇದೀಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಹಿಂದೂ ತಾಯಂದಿರು ಎಚ್ಚರಗೊಳ್ಳಬೇಕು , ಸೌಟು ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ, ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.

  ಉಡುಪಿಯಲ್ಲಿ ಖಾಸಗಿ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಹಿಂದೂ ಹೆಣ್ಣುಮಕ್ಕಳ ಮಾನ ತೆಗೆಯಲು ಇದೀಗ ಜಿಹಾದಿ ರಾಕ್ಷಸಿಯರು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು ಎಂದರು. ಹಿಂದೂ ತಾಯಂದಿರು ಎಚ್ಚರ ಆಗಬೇಕು, ಸೌಟು ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ, ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.


  ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್‌ ಮಾಡಿದ್ದಾರೆ. ವಿಡಿಯೋ ಪ್ರಕರಣ ನಡೆದ ಖಾಸಗಿ ಕಾಲೇಜಿನ ಡಾ‌.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಕೂಡಲೇ ಅಬ್ದುಲ್ ಖಾದರ್ ನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು, ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ,ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

  ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು, ಮದ್ರಾಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಾಸಾ ಶಿಕ್ಷಣವನ್ನು ಬ್ಯಾನ್ ಮಾಡಬೇಕು ಹಾಗೂ ಉಡುಪಿ ಕಾಲೇಜು ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಬೇಕು ಎಂದು ಶರಣ್ ಪಂಪ್ ವೆಲ್ ಹೇಳಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply