LATEST NEWS
ಬದಿಯಡ್ಕ ದಂತ ವೈದ್ಯರ ಸಾವಿನ ತನಿಖೆ ಕರ್ನಾಟಕದಲ್ಲಿ ನಡೆಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು ಮಾಡಿ ಉನ್ನತ ಮಟ್ಟದ ತನಿಖೆ ನಡಸುವಂತೆ ವಿಶ್ವ ಹಿಂದೂ ಪರಿಷತ್ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಿದೆ.
ಶಾಸಕ ವೇದವ್ಯಾಸ್ ಕಾಮತ್, ವಿಹೆಚ್‌ಪಿ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸಹಿತ ಆನೇಕ ಮುಖಂಡರುಗಳು ಈ ಸಂದರ್ಭ ಉಪಸ್ಥಿತರಿದ್ದರು. ಕಾಸರಗೋಡಿನ ಬದಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಾ. ಕೃಷ್ಣ ಮೂರ್ತಿಯವರ ಶವ ಕರ್ನಾಟಕದ ಉಡುಪಿ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಸಂಚಾಗಿದೆ. ಈಗಾಗಲೇ ಕೇರಳ ಕಾಸರಗೋಡಿನ ಬದಿಯಡ್ಕದಲ್ಲಿ ದೂರು ದಾಖಲಾಗಿ ತನಿಖೆ ನಡೆಯತ್ತಿದ್ದು ಈ ತನಿಖೆಯಲ್ಲಿ ವಿಶ್ವಾಸವಿಲ್ಲ. ಆದ್ದರಿಂದ ಅವರ ಶವ ದೊರೆತ ಕರ್ನಾಟಕದ ಉಡುಪಿ ಕುಂದಾಪುರದಲ್ಲಿ ಪ್ರಕರಣ ದಾಖಲು ಮಾಡಿ ಉನ್ನತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.